Kannada NewsKarnataka NewsLatest

*ಮತ್ತೆ 40 ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ 177 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದೀಗ ಮತ್ತೆ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಆ ಮೂಲಕ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಜಗಳೂರು, ಪಿರಿಯಾಪಟ್ಟಣ, ಕುಷ್ಟಗಿ, ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ, ಚಡಚಣ, ತಾಳಿಕೋಟೆ, ಗದಗ, ಮುಂಡರಗಿ, ರೋಣ, ಹಿರೇಕೆರೂರು, ಧಾರವಾಡ, ಕಲಘಟಗಿ, ಕುಂದಗೋಳ, ಅಳ್ನಾವರ, ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಉಡುಪಿ, ಬೈಂದೂರು, ಅಂಕೋಲ, ಭಟ್ಕಳ, ಹಳಿಯಾಳ, ಶಿರಸಿ ತಾಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದ ಸರ್ಕಾರ, ಬಳಿಕ ಸ್ಥಳ ಪರಿಶೀಲನೆ ಹಾಗೂ ಕೆಎಸ್​​ಎನ್​​ಡಿಎಂಸಿ ಸಲ್ಲಿಸಿದ ಸಮಗ್ರ ವರದಿಯ ಆಧಾರದ ಮೇಲೆ 23 ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತು. ಆದಾದ ಬಳಿಕ 53 ತಾಲೂಕುಗಳನ್ನು ಬರ ಪಟ್ಟಿಗೆ ಸೇರ್ಪಡೆ ಮಾಡಲಾಯಿತು. ಇದೀಗ ನಾಲ್ಕನೇ ಹಂತದಲ್ಲಿ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button