Belagavi NewsBelgaum NewsKannada NewsKarnataka NewsLatest

*400 ಕೋಟಿ ದರೋಡೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಎಸ್ಪಿಗೆ ಪತ್ರ ಬರೆದ ದೂರುದಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಬೆಳಗಾವಿಯಲ್ಲಿ  ಎಫ್‌ಐಆರ್ ದಾಖಲಿಸುವಂತೆ ಎಸ್ಪಿ ಕೆ.ರಾಮರಾಜನ್‌ಗೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದ ಎಸ್‌ಐಟಿ ಪೊಲೀಸರಿಂದ ಪಾರದರ್ಶಕ ತನಿಖೆ ಆಗ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಸಂದೀಪ್ ಪಾಟೀಲ್, ನನ್ನ ಬಳಿ ಕೆಲವೊಂದಿಷ್ಟು ಆಡಿಯೋ ದಾಖಲೆಗಳು ಇವೆ. ಅವುಗಳ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿ ಎಂದು ಬೆಳಗಾವಿ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಬೆಳಗಾವಿ ಎಸ್‌ಪಿ ಕೆ.ರಾಮರಾಜನ್‌ಗೆ ಪತ್ರ ಬರೆದಿರುವ 400 ಕೋಟಿ ದರೋಡೆ ಪ್ರಕರಣದ ದೂರುದಾರ ಸಂದೀಪ್ ಪಾಟೀಲ್, ಮಹಾರಾಷ್ಟ್ರ ಎಸ್‌ಐಟಿ ಪೊಲೀಸರಿಂದ ಪಾರದರ್ಶಕ ತನಿಖೆ ಆಗುತ್ತಿಲ್ಲ. ಘಟನೆ ಸಂಬಂಧ ಆಡಿಯೋ ದಾಖಲೆಗಳು ನನ್ನ ಬಳಿ ಇವೆ. ಅವುಗಳ ಆಧಾರದ ಮೇಲೆ ಎಫ್‌ಐಆ‌ರ್ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

Home add -Advt

Related Articles

Back to top button