ಇಲ್ಲಿ ಸಿಕ್ಕಿ ಬಿದ್ದಿದ್ದಾರೆ 400 ಜನ; ರಕ್ಷಣೆಗೆ ಮೊರೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ –
ಪ್ರವಾಹ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ. ಜಿಲ್ಲಾಡಳಿತ, ಸೇನಾಪಡೆ, ಎನ್ ಡಿಆರ್ ಎಫ್ ಸಿಬ್ಬಂದಿ, ಪೊಲೀಸರು, ಸಾರ್ವಜವನಿಕರು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು ಎಲ್ಲರೂ ದಿನವಿಡೀ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಜನರನ್ನು ಈವರೆಗೆ ಸ್ಥಳಾಂತರಿಸಲಾಗಿದೆ. 8 ಜನರು ಸಾವನ್ನಪ್ಪಿದ್ದಾರೆ. ಹೆಲಾಕಾಪ್ಟರ್ ಸಹಾಯದಿಂದಲೂ ಸ್ಥಳಾಂತರ ಮಾಡಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಗ್ರಾಮದ ಓಣಿ ಲಕ್ಷ್ಮೀನಗರದಲ್ಲಿ ಸುಮಾರು 400 ಕ್ಕಿಂತಲೂ ಹೆಚ್ಚು ಜನ ಸಿಕ್ಕಿ ಬಿದ್ದಿದ್ದಾರೆ. ಇವರೆಲ್ಲ ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.
ತಕ್ಷಣ ತಮ್ಮನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ವಿನಂತಿಸುತ್ತಿದ್ದಾರೆ. (ನಿವಾಸಿ ಭುಪಾಲ್ ದಾದು ಬೆಡಗೆ -9902673042, 8549039854).
ಅವರೆಲ್ಲ ತಮ್ಮನ್ನು ರಕ್ಷಿಸುವಂತೆ ಗಂಗಾಮಾತೆಯಲ್ಲಿ ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ. ತಕ್ಷಣ ಅವರನ್ನು ಕರೆತರುವ ಕೆಲಸ ಮಾಡಬೇಕಾಗಿದೆ. ಪ್ರಗತಿವಾಹಿನಿ ಈಗಾಗಲೆ ಜಿಲ್ಲಾಡಳಿತದ ಗಮನಕ್ಕೆ ತಂದಿದೆ. ಎಲ್ಲರನ್ನೂ ಉಳಿಸುವಂತಹ ಕೆಲಸ ಮಾಡಬೇಕಾಗಿದೆ.
(ನಿರಂತರ ಪ್ರವಾಹದ ಸುದ್ದಿಗಳು ಪ್ರಗತಿವಾಹಿನಿಯಲ್ಲಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ