Belagavi NewsBelgaum NewsKannada NewsKarnataka NewsNational
*ಬೋರ್‌ವೆಲ್ ನೀರು ಕುಡಿದು 41 ಜನ ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೋರ್‌ವೆಲ್ ನೀರು ಸೇವನೆಯಿಂದಾಗಿ ಸುಮಾರು 41 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸವದತ್ತಿ ತಾಲೂಕಿನ ಚಚಡಿಯಲ್ಲಿ ನಡೆದಿದೆ. ಓರ್ವ ಮಹಿಳೆ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಕಳೆದ ಒಂದು ವಾರದಿಂದ ಎಲ್ಲರಲ್ಲೂ ಅನಾರೋಗ್ಯ ಕಾಣಿಸಿಕೊಂಡಿತ್ತು. ಸೋಮವಾರ ಏಕಾಏಕಿ ಪರಿಸ್ಥಿತಿ ಉಲ್ಬಣಗೊಂಡು ವಾಂತಿ-ಬೇಧಿಯಿಂದಾಗಿ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಬೇಕಾಯಿತು. ಮನೆಗಳಿಗೆ ನೀರು ಪೂರೈಸುವ ಕೊಳವೆಯಲ್ಲಿ ಚರಂಡಿ ನೀರು ಸೇರಿರುವುದೇ ಅವಘಡಕ್ಕೆ ಕಾರಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಬೋರ್‌ವೆಲ್ ಮೂಲಕ ಟ್ಯಾಂಕ್‌ಗೆ ನೀರು ತುಂಬಿಸಿ ಅದನ್ನು ಮನೆಮನೆಗೆ ಸರಬರಾಜು ಮಾಡಲಾಗುತ್ತಿದ್ದು, ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ ಕಾರಣ ಈ ಘಟನೆ ಸಂಭವಿಸಿದೆಯೆನ್ನಲಾಗಿದೆ.
ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾಧಿಕಾರಿ ಡಾ. ಮಹೇಶ್ ಕೋಣಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.



