Kannada NewsKarnataka NewsLatest

ಬಹು ದಿನಗಳ ನಿರೀಕ್ಷೆಗೆ ಮುಕ್ತಿ: 44 ಜನರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ನಿಗಮ ಮಂಡಳಿ ಪಟ್ಟಿ ಕೊನೆಯೂ ಹೊರಬಿದ್ದಿದೆ.

44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ಬುಧವಾರ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

Home add -Advt

ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಸ್ಕೀಂ ಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. 

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಿದ್ದಾರೆ. 

ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ.

ಇದರಿಂದಾಗಿ ಹಲವು ತಿಂಗಳಿನಿಂದ ಕಾಂಗ್ರೆಸ್ ಕಾರ್ಯಕರ್ತರು ಕಾಯುತ್ತಿದ್ದ ನಿಗಮ ಮಂಡಳಿ ಪಟ್ಟಿ ಹೊರಬಿದ್ದಂತಾಗಿದೆ.

Related Articles

Back to top button