Kannada NewsKarnataka NewsLatest

*ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 456 ರೈತರು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಲಬಾದೆಯಿಂದ ಬೇಸತ್ತು ರಾಜ್ಯದಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚಿದೆ. ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಬೆಳಗಾವಿ ಎರಡನೇ ಸ್ಥಾನದಲ್ಲಿದೆ.

ಈ ವರ್ಷ ರಾಜ್ಯದಲ್ಲಿ ಮಳೆಕೊರತೆ, ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದು, ಸಾಲಬಾದೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಸಾವಿಗೆ ಶರಣಾಗುತ್ತಿರುವುದು ದುರಂತ. ಈ ವರ್ಷ ಏಪ್ರಿಲ್ ನಿಂದ ನವೆಂಬರ್ ವರೆಗೆ ಸಾಲಬಾಧೆಯಿಂದ 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 61 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯಲ್ಲಿ 56 ಹಾಗೂ ಚಿಕ್ಕಮಗಳೂರಿನಲ್ಲಿ49 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ವರ್ಷ ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 456 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ 354 ಪ್ರಕರಣಗಳು ಸರ್ಕಾರದ ಪರಿಹಾರಕ್ಕೆ ಅರ್ಹವಾಗಿವೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button