ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಬರಲಿರುವ ಲೋಕಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಾರ್ಟಿ 48 ಪುಟಗಳ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಎಲ್ಲ ರೀತಿಯ ಪ್ರಯತ್ನ, ದೇಶದಲ್ಲಿ ಸಮಾನ ನಾಗರಿಕ ನೀತಿ ಸಂಹಿತೆ ಜಾರಿ, ಜಮ್ಮಿ ಕಾಶ್ಮೀರಕ್ಕೆ ವಿಶೇಷ ಸ್ವಾತ್ತತೆ ರದ್ಧು ಸೇರಿದಂತೆ ಹಲವು ಭರವಸೆಗಳನ್ನು ಬಿಜೆಪಿ ನೀಡಿದೆ.
ರೈತರಿಗೆ ವಾರ್ಷಿಕ ಒಂದು ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡುವುದಾಗಿ ಬಿಜೆಪಿ ತಿಳಿಸಿದೆ. 2014ರೊಳಗೆ ದೇಶದ ಎಲ್ಲ ರೈಲ್ವೆ ಮಾರ್ಗ ವಿದ್ಯುದೀಕರಣ, 60 ಸಾವಿರ ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಭರವಸೆ ನೀಡಿದೆ.
ಕಳೆದ 5 ವರ್ಷದಲ್ಲಿ ಬಿಜೆಪಿ ಕೇಂದ್ರದಲ್ಲಿ ಮಾಡಿರುವ ಸಾಧನೆಗಳನ್ನು ಗಣ್ಯರು ಬಿಚ್ಚಿಟ್ಟರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ, ರಾಜನಾಥ ಸಿಂಗ್, ಅರುಣ ಜೈಟ್ಲೆ, ಸುಷ್ಮಾ ಸ್ವರಾಜ್ ಸೇರಿದಂತೆ ಗಣ್ಯರು ಹಾಜರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲಾ ಗ್ರುಪ್ ಗಳಿಗೆ ಹಾಗೂ ನಿಮ್ಮ ಪರಿಚಿತರಿಗೆ ಶೇರ್ ಮಾಡಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ