Latest

ಲೋಕಸಭಾ ಚುನಾವಣೆ ಬಳಿಕ ಸಮ್ಮಿಶ್ರ ಸ್ಫೋಟ -ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಗೋಕಾಕ

ಲೋಕಸಭಾ ಚುನಾವಣೆ ಬಳಿಕ ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಸ್ಫೋಟ ಸಂಭವಿಸಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಬಾಂವಿ ಮತ್ತು ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮಧ್ಯೆ ಯಾವುದೇ ಹೊಂದಾಣಿಕೆ ಇಲ್ಲ. ಸರಕಾರ ಶೀಘ್ರವಾಗಿ ಪತನವಾಗಲಿದೆ ಎಂದರು.ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ. ವಿರೋಧಿಗಳು ಅಕ್ರಮ ಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ಈ ಬಾರಿ ಸುರೇಶ ಅಂಗಡಿ ಸುಲಭವಾಗಿ ಗೆಲ್ಲಲಿದ್ದಾರೆ. ಕಳೆದ ಬಾರಿಯ ಗೊಂದಲಗಳು ಈಗ ಇಲ್ಲ ಎಂದರು.ಈ ಸಂದರ್ಭದಲ್ಲಿ ಮಹಾಂತೇಶ ಕವಟಗಿಮಠ, ಸುರೇಶ ಅಂಗಡಿ, ಮಹಾದೇವಪ್ಪ ಯಾದವಾಡ, ಆನಂದ ಮಾಮನಿ, ಜಗದೀಶ್ ಹಿರೇಮನಿ ಹಾಗೂ ಮತ್ತಿತರ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Home add -Advt

Related Articles

Back to top button