ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಕೊರತೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮನೆಯಲ್ಲಿ ಬರೋಬ್ಬರಿ 48 ಆಕ್ಸಿಜನ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಖಚಿತ ಮಾಹಿತಿ ಆಧಾರಾದ ಮೇಲೆ ದೆಹಲಿ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿದ್ದು, 32 ದೊಡ್ಡ ಆಕ್ಸಿಜನ್ ಸಿಲಿಂಡರ್ ಹಾಗೂ 16 ಚಿಕ್ಕ ಆಕ್ಸಿಜನ್ ಸಿಲಿಂಡರ್ ಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಆರೋಪಿ 51 ವರ್ಷದ ಅನಿಲ್ ಕುಮಾರ್ ನನ್ನು ಬಂಧಿಸಿದ್ದಾರೆ.
ವ್ಯಕ್ತಿ ದೊಡ್ಡ ಸಿಲಿಂಡರ್ ನಿಂದ ಚಿಕ್ಕ ಸಿಲಿಂಡರ್ ಗೆ ಆಕ್ಸಿಜನ್ ವರ್ಗಾಯಿಸುತ್ತಿದ್ದ. ಬಳಿಕ ಒಂದು ಸಿಲಿಂಡರ್ ನ್ನು 12,500 ರೂಪಾಯಿಗೆ ಮಾರಾಟ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ