*ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಸೋಂಕು ದೃಢ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಏಕಾಏಕಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಬೆಂಗಳೂರಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಬಿಎಂಸಿ ಹಾಸ್ಟೇಲ್ ನ 47 ವಿದ್ಯಾರ್ಥಿನಿಯರು ಏಕಾಎಕಿ ಅಸ್ವಸ್ಥರಾಗಿ ನಿನ್ನೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಇಬ್ಬರು ವಿದ್ಯಾರ್ಥಿನಿಯರು ತೀವ್ರ ಅಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದ್ದಕ್ಕಿದ್ದಂತೆ ವಾಂತಿ-ಭೇದಿ, ನಿರ್ಜಲೀಕರಣ ಅತಿಸಾರದಿಂದ ಬಳಲುತ್ತಿರುವ 47 ವಿದ್ಯಾರ್ಥಿನಿಯರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾಳೆ ವರದಿ ಬರಲಿದೆ.
ಈ ನಡುವೆ ಇಬ್ಬರು ವಿದ್ಯಾರ್ಥಿನಿಯರ ವರದಿ ಬಂದಿದ್ದು, ಇಬ್ಬರಲ್ಲಿಯೂ ಕಾಲರಾ ಸೋಂಕು ದೃಢಪಟ್ಟಿದೆ. ಹಾಸ್ಟೇಲ್ ನ 49 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಹಾಸ್ಟೇಲ್ ಗೆ ಆರೋಗ್ಯಾಧಿಕಾರಿ ಭೇಟಿ ನೀಡಿದ್ದು, ನೀರಿನ ಪರೀಕ್ಷೇ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡವೆ ಕಾಲರಾ ಪ್ರಕರಣಗಳು ಹೆಚ್ಚುತ್ತಿವೆ. ಒಂದೆಡೆ ಕುಡಿಯುವ ನೀರಿನ ಸಮಸ್ಯೆ, ಇನ್ನೊಂದೆಡೆ ಬಿಸಿಲ ಝಳದಿಂದಾಗಿ ನಗರದಲ್ಲಿ ಹಲವರು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ವಾಂತಿ-ಬೇಧಿಯಿಂದ ಬಳಲುತ್ತಿರುವುದು ಕಾಲರಾ ಶಂಕೆ ಕೂಡ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ರಕ್ತದ ಮಾದರಿ ತಪಾಸಣೆಗೆ ಕಳುಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ