Cancer Hospital 2
Beereshwara 36
LaxmiTai 5

*ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 490 ಕೊಲೆ ಆಗಿದೆ: ಪ್ರಲ್ಹಾದ್ ಜೋಶಿ* 

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಬರೋಬ್ಬರಿ 600ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 490 ಕೊಲೆಗಳು ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

Emergency Service

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಕೊಲೆಯಾದ ಅಂಜಲಿ ಅಂಬೀಗೆರ ಮನೆಗೆ ಭೇಟಿ ನೀಡಿ, ಮಾತನಾಡಿದ ಅವರು, ಅಂಜಲಿಯ ಅಜ್ಜಿ ಹಾಗೂ ಸಹೋದರಿಯರು ಈ ಹಿಂದೆ ಆರೋಪಿ ಬಗ್ಗೆ ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ. ಪ್ರಕರಣದಲ್ಲಿ ಯಾವ ಅಧಿಕಾರಿಗಳಿದ್ದರು ಅವರ ಬಗ್ಗೆ ತನಿಖೆಯಾಗಬೇಕು.‌ ನೇಹಾ ಕೊಲೆಯಾದಾಗ ಮುಖ್ಯಂಮತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ನೀಡಿದ ಹೇಳಿಕೆಗಳು ಕೃತ್ಯ ನಡೆಸುವವರಿಗೆ ಪ್ರೋತ್ಸಾಹ ನೀಡಿದಂತಾಯಿತು. ಹೊಣೆಗೇಡಿತನದ ಹೇಳಿಕೆಗಳ ಪರಿಣಾಮದಿಂದ ಅಂಜಲಿ ಹತ್ಯೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದರು. 

ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲ. ಕೊಲೆ ಹಾಗೂ ರೈತರ ಆತ್ಮಹತ್ಯೆಗಳ ಕುರಿತು ಪ್ರಶ್ನೆ ಮಾಡಿದರೆ, ಬಿಜೆಪಿ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಎಂದು ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ಧಿ ಎಂಬುದು ಸಮಾಧಿಯಾಗಿದೆ ಎಂದು ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

Bottom Add3
Bottom Ad 2