Kannada NewsLatest

ಬೆಳಗಾವಿ ಬಳಿ ಅಪಘಾತ: ಐವರು ಬಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಉಂಟಾಗಿ ಐವರು ಸಾವಿಗೀಡಾಗಿದ್ದಾರೆ.

ಶ್ರೀನಗರ ಗಾರ್ಡನ್ ಬಳಿ ಈ ಅಪಘಾತ ನಡೆದಿದೆ. ರಸ್ತೆ ದುರಸ್ತಿ ನಡೆಯುತ್ತಿದ್ದುದರಿಂದ ಸಂಚಾರ ಅಸ್ತವ್ಯಸ್ತವಾಗಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.  

ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿರುವ ಓರ್ವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button