Belagavi NewsBelgaum NewsKannada NewsKarnataka NewsLatest
*ಪೂರ್ಣ ತೆರಿಗೆ ಪಾವತಿದಾರರಿಗೆ ಶೇ.5 ರಿಯಾಯಿತಿ: ಮೇ. 31ರವರೆಗೆ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ 2026 – 27 ನೇ ಸಾಲಿನ ಅಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ. 31 ರ ವರೆಗೆ ವಿಸ್ತರಿಸಲಾಗಿದೆ.
ತೆರಿಗೆದಾರರು ಅವಧಿ ವಿಸ್ತರಣೆಯ ಸದುಪಯೋಗ ಪಡಿಸಿಕೊಂಡು ತಮ್ಮ ಆಸ್ತಿಗಳ ಪೂರ್ಣ ಪ್ರಮಾಣದ ತೆರಿಗೆಯನ್ನು ಪಾವತಿಸುವ ಮೂಲಕ ರಿಯಾಯಿತಿಯ ಲಾಭ ಪಡೆದುಕೊಂಡು ಮಹಾನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕೆಂದು ಪಾಲಿಕೆಯ ಆಯುಕ್ತರಾದ ಕಾರ್ತಿಕ ಎಂ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



