Latest

5 ಜಿಲ್ಲೆಗಳಲ್ಲಿ ಒಮಿಕ್ರಾನ್ ಅಟ್ಟಹಾಸ; ವ್ಯಾಕ್ಸಿನ್ ಪಡೆಯದಿದ್ದರೆ ಜೀವಕ್ಕೆ ತೊಂದರೆ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ 5 ಜಿಲ್ಲೆಗಳಲ್ಲಿ ಒಮಿಕ್ರಾನ್ ಪ್ರಕರಣ ಕಂಟಕವಾಗುತ್ತಿದೆ. ಬೆಂಗಳೂರು, ಮಂಡ್ಯ, ಮೈಸೂರು, ಉಡುಪಿ, ಕೋಲಾರ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಪರಿಣಾಮ ಬೀರುತ್ತಿದೆ. ವ್ಯಾಕ್ಸಿನೇಷನ್ ಪಡೆದುಕೊಳ್ಳದಿದ್ದರೆ ಜೀವಕ್ಕೆ ತೊಂದರೆಯಾಗಬಹುದು. ಹಾಗಾಗಿ ನಿರ್ಲಕ್ಷ ಮಾಡದೇ ಎಲ್ಲರೂ 2 ಡೋಸ್ ಲಸಿಕೆ ಪಡೆಯಿರಿ ಎಂದರು.

ಒಮಿಕ್ರಾನ್, 3ನೇ ಅಲೆ ವೇಗವಾಗಿ ಹರಡುತ್ತಿದೆ. ಕೇಸ್ ಹೆಚ್ಚಾಗುವುದನ್ನು ತಡೆಯಲು ಸಾಧ್ಯವೇ ಇಲ್ಲ. ಆದರೆ ಲಸಿಕೆ ಪಡೆಯುವುದರಿಂದ ಸಾವು-ನೋವನ್ನು ತಪ್ಪಿಸಬಹುದು. ನಿನ್ನೆ ಒಂದೇ ದಿನ ಪಾಸಿಟಿವಿಟಿ ರೇಟ್ 3.95ರಷ್ಟಾಗಿದೆ. ಜನರು ಸ್ವತ: ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.

ಮಧ್ಯಾಹ್ನ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಯಲಿದೆ. ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಇನ್ನಷ್ಟು ನಿಯಮಗಳಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಮಹಿಳಾ ತಹಶೀಲ್ದಾರ್, ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button