Latest

ಮತ್ತೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಾರದ ಹಿಂದಷ್ಟೇ ಮಂಡ್ಯ ಜಿಲ್ಲೆ ಎಸ್ ಪಿಯಾಗಿ ನೇಮಕಗೊಂಡಿದ್ದ ಸುಮನ್ ಡಿ ಪನ್ನೇಕರ್ ಅವರನ್ನು ಅಧಿಕಾರ ವಹಿಸಿಕೊಳ್ಳುವ ಮೊದಲೇ ವರ್ಗಾವಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆ ನೂತನ ಮಹಿಳಾ ಎಸ್ ಪಿ ನೇಮಕಾತಿ ವಿವಾದ ರಾಜ್ಯಪಾಲರ ಅಂಗಳ ತಲುಪಿತ್ತು. ಇದರ ಬೆನ್ನಲ್ಲೇ ಇದೀಗ ಮಂಡ್ಯಕ್ಕೆ ಹೊಸ ಪೊಲೀಸ್ ವರಿಷ್ಠಾಧಿಕಾರಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

Home add -Advt

ಮಂಡ್ಯ ಜಿಲ್ಲೆಯ ಎಸ್ ಪಿಯಾಗಿ ನೇಮಕಗೊಂಡಿದ್ದ ಸುಮನ್ ಡಿ ಪನ್ನೇಕರ್ ಅವರನ್ನು ಉತ್ತರ ಕನ್ನಡ ಜಿಲ್ಲೆ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಗೆ ಎನ್.ಯತೀಶ್ ಅವರನ್ನು ನೇಮಕ ಮಾಡಲಾಗಿದೆ.

ಇಷಾ ಪಂತ್ ಅವರನ್ನು ಕಲಬುರ್ಗಿ ಎಸ್ ಪಿಯಾಗಿ, ಎಸ್.ಪಿ ದೇವರಾಜ್ ಅವರನ್ನು ಗದಗ ಎಸ್ ಪಿಯಾಗಿ ಹಾಗೂ ಡಾ.ಸಿಮಿ ಮರಿಯಮ್ ಜಾರ್ಜ್ ಅವರನ್ನು ಮೈಸೂರು ಪೊಲೀಸ್ ಅಕಾಡೆಮಿ ಉಪ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕನ್ನಡ ರಾಜ್ಯೋತ್ಸವ, ದೀಪಾವಳಿಗೆ ಹೊಸ ಗೈಡ್ ಲೈನ್ ಪ್ರಕಟ

Related Articles

Back to top button