Latest

ಶಿವಮೊಗ್ಗದಲ್ಲಿ ಸ್ಫೋಟ ಪ್ರಕರಣ; ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದಲ್ಲಿ ಐವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಘಟನಾ ಸ್ಥಳಕ್ಕೆ ಬಾಂಬ್ ಸ್ಕ್ವ್ಯಾಡ್ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಕ್ರಮ ಗಣಿಗಾರಿಕೆಯಿಂದಲೇ ಈ ದುರಂತ ಸಂಭವಿಸಿದ್ದರೆ ಆ ಬಗ್ಗೆ ತನಿಖೆ ನಡೆಸಲಾಗುವುದು. ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

Home add -Advt

ನಾಳೆ ಘಟನಾ ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡುತ್ತೇನೆ. ಪ್ರಾಥಮಿಕ ತನಿಖೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related Articles

Back to top button