Latest

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟಗೊಂಡಿದೆ. 7 ಹಂತಗಳಲ್ಲಿ ಮಾದಾನ ನಡೆಯಲಿದೆ.

ನವದೆಹಲಿಯ ವಿಜ್ಞಾನಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಚುನಾವಣಾ ಆಯುಕ್ತ ಸುಶೀಲ್ ಚಂದ್ರ, 5 ರಾಜ್ಯಗಳಾದ ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು. ಕೋವಿಡ್ ಸಂದರ್ಭದಲ್ಲಿ ಚುನಾವಣೆ ಒಂದು ಸವಾಲು. ಆದರೆ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಚುನಾವಣೆ ನಡೆಸಲಾಗುವುದು ಎಂದರು.

5 ರಾಜ್ಯಗಳ ಒಟ್ಟು 690 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 18.3 ಕೋಟಿ ಮತದಾರರಿದ್ದಾರೆ. 24.9 ಲಕ್ಷ ಮತದಾರರು ಮೊದಲ ಬಾರಿ ಮತದಾನಮಾಡುತ್ತಿದ್ದಾರೆ. ಚುನಾವಣೆಗಾಗಿ ಎಲ್ಲಾರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ಚೇತನರು, ಕೋವಿಡ್ ಸೋಂಕಿತರು ಹಾಗೂ 80 ವರ್ಷ ಮೇಲ್ಪಟ್ಟವರು ಮನೆಯಿದಲೇ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಬಹುದು ಎಂದು ಹೇಳಿದರು.

ಎಲ್ಲಾ 5 ರಾಜ್ಯಗಳಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಫೆಬ್ರವರಿ 10ರಿಂದ ಮೊದಲ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Home add -Advt

ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ಫೆ.10ರಂದು ಮತದಾನ ನಡೆಯಲಿದೆ. ಫೆ.14ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಫೆ.20 ಮೂರನೇ ಹಂತದ ಮತದಾನ, ಫೆ.23ರಂದು 4ನೇ ಹಂತದ ಮತದಾನ, ಫೆ. 27ರಂದು 5ನೇ ಹಂತ, ಮಾರ್ಚ್ 3ರಂದು 6ನೇ ಹಂತ ಹಾಗೂ ಮಾರ್ಚ್ 7ರಂದು 7ನೇ ಹಂತದ ಮತದಾನ ನಡೆಯಲಿದೆ.

ಪಂಜಾಬ್, ಉತ್ತರಾಖಂಡ್, ಗೋವಾ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಈ ಮೂರು ರಾಜ್ಯಗಳಲ್ಲಿ ಫೆ.14ರಂದು ಮತದಾನ ನಡೆಯಲಿದೆ.

ಮಣಿಪುರದಲ್ಲಿ ಎರಡು ಹಮ್ಟಗಳಲ್ಲಿ ಮತದಾನ ಫೆ. 27 ರಂದು ಮೊದಲ ಹಂತ ಹಾಗೂ ಮಾರ್ಚ್ 3ರಂದು ಎರಡನೇ ಹಂತದ ಮತದಾನ ನಡೆಯಲಿದೆ.

ಮಾರ್ಚ್ 10ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ತಕ್ಷಣದಿಂದಲೇ 5 ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದರು.

ಗೋವಿಂದ ಕಾರಜೋಳ ಓರ್ವ ಮೂರ್ಖ ಮಂತ್ರಿ; ಎಂ.ಬಿ.ಪಾಟೀಲ್ ವಾಗ್ದಾಳಿ

Related Articles

Back to top button