Latest

4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಸಚಿವ ಅಶ್ವತ್ಥ ನಾರಾಯಣ ವಿಶ್ವಾಸ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಪಂಚರಾಜ್ಯ ಚುನಾವಣೆ ಮತ ಎಣಿಕೆ ಕಾರ್ಯ ಬರದಿಂದ ಸಾಗಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ನಾವು ಖಂಡಿತ ಫೋರ್ ಹೊಡೆಯುತ್ತೇವೆ. ಐದರ ಪೈಕಿ ನಾಲ್ಕು ರಾಜ್ಯದ ಬಗ್ಗೆ ಭರವಸೆ ಇದೆ. ನಾಲ್ಕು ರಾಜ್ಯದಲ್ಲಿ ನಮ್ಮ ಸರ್ಕಾರ ರಚನೆಯಾಗುತ್ತೆ. ಒಂದು ರಾಜ್ಯದಲ್ಲಿ ಮಾತ್ರ ಹಿನ್ನೆಡೆ ಇದೆ ಎಂದು ಹೇಳಿದ್ದಾರೆ.

Related Articles

ಪ್ರತಿಪಕ್ಷ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ರಾಷ್ಟ್ರೀಯ ಪಕ್ಷದ ಸ್ವರೂಪವನ್ನೇ ಅದು ಕಳೆದುಕೊಂಡಿದೆ. ಜನ ಸಹ ಆ ಪಕ್ಷದ ಮೇಲೆ ಭರವಸೆ ಇಟ್ಟಿಲ್ಲ. ನಮ್ಮ ರಾಜ್ಯದಲ್ಲಿಯೂ ಕಾಂಗ್ರೆಸ್ ಇರುವುದಿಲ್ಲ. 2023ಕ್ಕೆ ರಾಜ್ಯದಲ್ಲಿ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದರು.

ಇನ್ನು ಪಂಜಾಬ್‌ದಲ್ಲಿ ನಮ್ಮದು ಪಾಲ್ಗೊಳ್ಳುವಿಕೆ ಹೆಚ್ಚಿರಲಿಲ್ಲ. ಅಲ್ಲಿನ ಜನಾಭಿಪ್ರಾಯ ಸ್ವೀಕರಿಸುತ್ತೇವೆ ಎಂದು ಹೇಳಿದರು.

Home add -Advt

ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾದಲ್ಲಿ BJP, ಪಂಜಾಬ್​ನಲ್ಲಿ AAP ಮುನ್ನಡೆ

Related Articles

Back to top button