ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನೆಯಲ್ಲಿ ಮತ ಎಣಿಕೆ ಕಾರ್ಯ ಬಿರುಸು ಪಡೆದುಕೊಂಡಿದ್ದು, ಎರಡು ರಾಜ್ಯಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ದಟ್ಟವಾಗಿದೆ.
ಈಗಾಗಲೇ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಬಹುತೇಕ ಖಚಿತವಾಗಿದ್ದು, ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ. ಪಂಜಾಬ್ ನ 117 ವಿಧಾನಸಭಾ ಕ್ಷೇತ್ರಗಳ ಪೈಕಿ 89 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ 13 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಉತ್ತರ ಪ್ರದೇಶದದಲ್ಲಿ 403 ವಿಧಾನಸಭಾ ಕ್ಷೇತ್ರಗಳ ಪೈಕಿ 268 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, 128 ಕ್ಷೇತ್ರಗಳಲ್ಲಿ ಎಸ್ ಪಿ ಮುನ್ನಡೆ ಕಾಯ್ದುಕೊಂಡಿದೆ.
ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಪೈಕಿ 45 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಗೆಲುವು ಬಹುತೇಕ ನಿಶ್ಚಿತವಾಗಿದೆ.
ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 30 ಹಾಗೂ ಕಾಂಗ್ರೆಸ್ 9, ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 18 ಹಾಗೂ ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಮಣಿಪುರ ಹಾಗೂ ಗೋವಾ ವಿಧಾನಸಭೆಯಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ದಟ್ಟವಾಗಿದೆ.
ಗೋವಾ ಚುನಾವಣಾ ಫಲಿತಾಂಶ: ತುರ್ತು ಸಭೆ ಕರೆದ ಕಾಂಗ್ರೆಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ