Latest

ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ಸರ್ಕಾರ

ಪ್ರಗತಿವಾಹಿನಿ ಸುದ್ದಿ; ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಬರೋಬ್ಬರಿ 264 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಉತ್ತರಪ್ರದೇಶದಲ್ಲಿ ಬಿಜೆಪಿ ನಿಚ್ಛಳ ಬಹುಮತ ಪಡೆದಿದ್ದು, ಸಿಎಂ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಬಿಜೆಪಿ 264 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಸಮಾಜವಾದಿ ಪಕ್ಷ 96 ಕ್ಷೇತ್ರಗಳಲ್ಲಿ, ಬಿಎಸ್ ಪಿ ಹಾಗೂ ಕಾಂಗ್ರೆಸ್ ತಲಾ 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಗೋರಖ್ ಪುರ ಕ್ಷೇರದಲ್ಲಿ ಯೋಗಿ ಆದಿತ್ಯನಾಥ್ 12,000 ಮತಗಳಿಂದ ಮುನ್ನಡೆಯಲ್ಲಿದ್ದಾರೆ.

4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಸಚಿವ ಅಶ್ವತ್ಥ ನಾರಾಯಣ ವಿಶ್ವಾಸ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button