Latest

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ; ಯಾವ ರಾಜ್ಯದಲ್ಲಿ ಯಾರಿಗೆ ಗೆಲುವು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರೆ, ತಮಿಳುನಾಡಿನಲ್ಲಿ ದಶಕದ ಬಳಿಕ ಡಿಎಂಕೆ ಜಯಭೇರಿ ಬಾರಿಸಿದೆ. ಕೇರಳದಲ್ಲಿ ಎಲ್ ಡಿಎಫ್ ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ. ಅಸ್ಸಾಂ ನಲ್ಲಿ ಬಿಜೆಪಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರೆ ಪುದುಚೆರಿಯಲ್ಲಿ ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ.

5 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗೆಲುವು ಪಡೆದ ರಾಜಕೀಯ ನಾಯಕರಿಗೆ ಪ್ರಧಾನಿ ಮೋದಿ ಶುಭಾಷಯಗಳನ್ನು ಕೋರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಿದ ಟಿಎಂಸಿ ನೇತೃತ್ವದ ಮಮತಾ ಬ್ಯಾನರ್ಜಿಯವರಿಗೆ ಅಭಿನಂದನೆಗಳು. ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ ಎಲ್ಲಾ ರೀತಿಯ ನೆರವು ಮುಂದುವರೆಸುತ್ತದೆ ಎಂದು ಹೇಳಿದ್ದಾರೆ.

ಈವರೆಗೆ ಪಶ್ಚಿಮ ಬಂಗಾಳದಲ್ಲಿ ನಮ್ಮ ಪಕ್ಷಕ್ಕೆ ಅಸ್ತಿತ್ವವೇ ಇರಲಿಲ್ಲ. ಆದರೆ ಈ ಬಾರಿ ಅಲ್ಲಿನ ಸಹೋದರ ಸಹೋದರಿಯರು ಬಿಜೆಪಿಗೆ ಆಶಿರ್ವದಿಸಿದ್ದಾರೆ. ಬಿಜೆಪಿ ಅಸ್ತಿತ್ವವೂ ಗಣನೀಯ ಪ್ರಮಾಣದಲ್ಲಿ ವೃದ್ಧಿಸಿದೆ ಎಂದಿದ್ದಾರೆ.

ಕೇರಳದಲ್ಲಿ ಎಲ್ ಡಿಎಫ್ ಮೈತ್ರಿಕೂಟವನ್ನು ಮತ್ತೊಮ್ಮೆ ಅಧಿಕಾರಕ್ಕೆ ತಂದ ಪಿಣರಾಯಿ ವಿಜಯನ್ ಅವರನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ತಮಿಳುನಾಡಿನಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೇರಲು ಸಜ್ಜಾಗಿರುವ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಗೂ ಅಭಿನಂದಿಸಿದ್ದಾರೆ.

ಅಸ್ಸಾಂ ನಲ್ಲಿ ಎನ್ ಡಿಎ ಮೈತ್ರಿಕೂಟದ ಅಭಿವೃದ್ಧಿ ಕೆಲಸ ಹಾಗೂ ಅಲ್ಲಿನ ರಾಜ್ಯ ಸರ್ಕಾರದ ಜನಪರ ಕಾರ್ಯಗಳಿಗೆ ಜನರು ಬೆಂಬಲ ನೀಡಿರುವುದಕ್ಕೆ ಕೃತಜ್ನತೆಗಳು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ರೋಚಕ ತಿರುವು ಪಡೆದ ನಂದಿಗ್ರಾಮದ ಮತ ಎಣಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button