Latest

ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಸೋಲು ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಆತ್ಮಾವಲೋಕನ ಸಭೆ ನಡೆಯಲಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಉನ್ನತ ಮಟ್ಟದ ಕಾರ್ಯಕಾರಿಣಿ ಸಮಿತಿ ಸಭೆ ಇದಾಗಿದ್ದು, ಚುನಾವಣಾ ಸೋಲಿನ ಪರಾಮರ್ಶೆ, ಭವಿಷ್ಯದಲ್ಲಿ ಕಾಂಗ್ರೆಸ್ ಕೈಗೊಳ್ಳಬೇಕಿರುವ ಕಾರ್ಯಚಟುವಟಿಕೆ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರ ಚರ್ಚಿಸಲಿದೆ.

ಸೋನಿಯಾ ಗಾಂಧಿ ಪಕ್ಷದ ಎಲ್ಲಾ ನಾಯಕರನ್ನು ಸಭೆಗೆ ಆಹ್ವಾನಿಸಿದ್ದು, ಮುಕ್ತವಾಗಿ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆ. ಫಲಿತಾಂಶ ಪ್ರಕಟವಾದ ಹಲವು ವಾರಗಳ ನಂತರ ಸಭೆಗಳನ್ನು ಕಾಂಗ್ರೆಸ್ ಈ ಹಿಂದೆ ಸಾಮಾನ್ಯವಾಗಿ ಕರೆಯುವುದು ವಾಡಿಕೆಯಾಗಿತ್ತು. ಆದರೆ ಈಗ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾದ ಮೂರು ದಿನಗಳಲ್ಲೇ ಕೇಂದ್ರ ಕಾರ್ಯಕಾರಿ ಸಮಿತಿ ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ.

ಮಾರ್ಚ್.14ರಿಂದ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಿರುವ ಅಂಶಗಳ ಬಗ್ಗೆಯೂ ಚರ್ಚೆ ನಡೆಯಲಿದೆ.

Home add -Advt

ಅಗ್ನಿ ದುರಂತ; ವ್ಯಕ್ತಿ ಸಜೀವ ದಹನ

Related Articles

Back to top button