Kannada NewsLatestNationalPolitics

*ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಆರಂಭ: ಹೇಗಿದೆ ಸದ್ಯದ ಟ್ರೆಂಡ್?*

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಹಾಗೂ ಕರ್ನಾಟಕದ ಎರಡು ಕ್ಷೇತ್ರಳ ಉಪಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ಚುರುಕುಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಆರಂಭವಾಗಿದೆ. ಟಿಎಂಸಿಗಿಂತಲು ಬಿಜೆಪಿ ಮುನ್ನಡೆಯಲ್ಲಿರುವುದು ತೀವ್ರ ಕುತೂಹಲ ಮೂಡಿಸಿದೆ.

Home add -Advt

ಸದ್ಯದ ಮಾಹಿತಿ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಎಂಸಿ 102 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಪಶ್ಚಿಮ ಬಂಗಾಳದಲ್ಲಿ ಕ್ಷಣ ಕ್ಷಣಕ್ಕೂ ಟ್ರೆಂಡ್ ಬದಲಾಗುತ್ತಿದೆ.

ತಮಿಳುನಾಡಿನಲ್ಲಿ ಡಿಎಂಕೆ55 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಅಸ್ಸಾಂನಲ್ಲಿ ಬಿಜೆಪಿ 62, ಕಾಂಗ್ರೆಸ್ 9, ಪುದುಚೆರಿಯಲ್ಲಿ 22 ಹಾಗೂ ಕೇರಳದಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ ಮುನ್ನಡೆಯಲಿದೆ. ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.


Related Articles

Back to top button