Kannada NewsLatestNationalPolitics

*ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗದಿ; ಚುನಾವಣಾ ಆಯೋಗ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಚರಾಜ್ಯಗಳ ಚುನಾವಣೆ ದಿನಾಂಕ ಘೊಷಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ತೆಲಂಗಾಣ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ, ಹಾಗೂ ಮಿಜೋರಾಂ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ಮಧ್ಯಪ್ರದೇಶ ಹಾಗೂ ಮಿಜೋರಾಂ ನಲ್ಲಿ ನವೆಂಬರ್ 7ರಂದು ಮತದಾನ ನಡೆಯಲಿದೆ.

ಛತ್ತೀಸ್ ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್ 23 ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ಕ್ಕೆ ಹೊರಬೀಳಲಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button