
ಪ್ರಗತಿವಾಹಿನಿ ಸುದ್ದಿ: ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೂವರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಈಜಲೆಂದು ಮೇಕೆದಾಟು ಸಂಗಮದಲ್ಲಿ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಐವರೂ ಸಾವನ್ನಪ್ಪಿದ್ದಾರೆ.
ನೀರುಪಾಲಾಗಿದ್ದ ವಿದ್ಯಾರ್ಥಿಗಳ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಕಾವೇರಿ ನದಿಯಿಂದ ಹೊರತೆಗೆದಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ