Kannada NewsKarnataka NewsLatestNational

*BIG BREAKING* *ಹುಬ್ಬಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಯ ಎನ್‌ಕೌಂಟರ್‌*

ಹುಬ್ಬಳ್ಳಿಯಲ್ಲಿ ಎನ್ ಕೌಂಟರ್ ಮಾಡಿದ PSI ಅನ್ನಪೂರ್ಣ

ಪ್ರಗತಿವಾಹಿನಿ ಸುದ್ದಿ : 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿದ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯು ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

ಆರೋಪಿ ರಕ್ಷಿತ್ ಕಾಂತಿ ಎಂಬಾತ ಪೊಲೀಸರ ಗುಂಡೇಟಿಗೆ ಮಟ್ಯಾಶ್ ಆಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಅವನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೆಪ್ ಆಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಮೇಲೆ ಫೈರಿಂಗ್ ಮಾಡಿದ್ದು, ಎದೆಗೆ ಗುಂಡು ತಗುಲಿ ಸ್ಥಳದಲ್ಲೇ ಪಾಪಿ ಖಲ್ಲಾಸ್ ಆಗಿದ್ದಾನೆ ಎಂದು ತಿಳಿದು ಬಂದಿದೆ.

Home add -Advt

ಇತ್ತ ಘಟನೆಯಲ್ಲಿ ಒಬ್ಬ ಪಿಎಸ್‌ಐ ಮತ್ತು ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿಯು ಬಾಲಕಿಗೆ ಚಾಕ್ಲೀಟ್ ಆಸೆ ತೋರಿಸಿ ಕಿಡ್ನಾಪ್ ಮಾಡಿ ಬಳಿಕ ಅತ್ಯಾಚಾರ ಮಾಡಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಘಟನೆ ಖಂಡಿಸಿ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದು, ಆತನನ್ನು ಎನ್‌ಕೌಂಟರ್ ಮಾಡುವಂತೆ ಆಗ್ರಹಿಸಿದ್ದರು.

Related Articles

Back to top button