
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ನಾಯಿ ಕಡಿತಕ್ಕೊಳಗಾಗಿದ್ದ ಬಾಲಕ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಜಿಲ್ಲೆಯ ಗೌರಿಬಿದನೂರಿನ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
5 ವರ್ಷದ ಮಗು ಸಮೀರ್ ಮೃತ ಬಾಲಕ. ಸಮೀರ್ ಗೆ ಅ.30ರಂದು ನಾಯಿ ಕಡಿದಿತ್ತು. ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮೀರ್ ಗೆ ಇಂಜಕ್ಷನ್ ನೀಡಲಾಗಿತ್ತು. ಆದರೆ 5 ದಿನಗಳ ಬಳಿಕ ಬಾಲಕನಿಗೆ ತೀವ್ರ ಜ್ವರ ಬರಲು ಆರಂಭವಾಗಿದೆ. ಗೌರಿಬಿದನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಾಲಕನನ್ನು ದಾಖಲಿಸಲಾಗಿತ್ತು. ಆದರೂ ಜ್ವರ ಕಡಿಮೆಯಾಗಿರಲಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಬೆಂಗಳೂರಿನ ಇಂಧಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂಧಿರಾ ಗಾಂಧಿ ಆಸ್ಪತ್ರೆ ವೈದ್ಯರು ನಾಯಿ ಕಡಿತಕ್ಕೆ ಬಾಲಕನಿಗೆ ಸೂಕ್ತ ಇಂಜಕ್ಷನ್ ನೀಡಿಲ್ಲ. ಮಗುವಿಗೆ ಮೆದುಳಿಗೆ ವಿಷ ಏರಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.
ಇದರಿಂದ ನೊಂದ ಪೋಷಕರು ಮಗುವಿಗೆ ನೀಡಿದ ಇಂಜಕ್ಷನ್ ಬಗ್ಗೆ ವೈದ್ಯರ ಬಳಿ ಮಾಹಿತಿ ಕೇಳಿದರೂ ಕೊಡುತ್ತಿಲ್ಲ ಎಂದುಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಮಗು ಬಲಿಯಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ.
ಸ್ಥಳಕ್ಕೆ ಆಗಮಿಸಿದ ತಾಲೂಕು ಆರೋಗ್ಯಾಧಿಕಾರಿ ರತ್ನಮ್ಮ ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪೋಷಕರನ್ನು ಸಮಾಧಾನಪಡಿಸಿ ಸ್ಥಳದಿಂದ ಕಳುಹಿಸಿದ್ದಾರೆ.
45 ಲಕ್ಷ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ