
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಐದು ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ನೀಡಿ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಸಯ್ಯದ್ ಮುಜಾಮಿಲ್ (45) ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. ಈತ ಸಂತ್ರಸ್ತ ಬಾಲಕಿಯ ತಾಯಿಯನ್ನು ಮೂರನೇ ಮದುವೆಯಾಗಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಮಗಳ ಮೇಲೆಯೇ ಪೈಶಾಚಿಕ ಕೃತ್ಯವೆಸಗಿದ್ದಾನೆ.
ಚಾಮರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಸಯ್ಯದ್ ಗೆ ಕೋರ್ಟ್ 20 ವರ್ಷ ಜೈಲುಶಿಕ್ಷೆ ಹಾಗೂ ನೊಂದ ಬಾಲಕಿಗೆ 6 ಲಕ್ಷ ಪರಿಹಾರ ನೀಡಲು ಆದೇಶ ನೀಡಿದೆ.