Kannada NewsLatestNational

*ರಥೋತ್ಸವದ ವೇಳೆ ಕಾಲ್ತುಳಿತ; ರಥದ ಚಕ್ರಕ್ಕೆ ಸಿಲುಕಿ 5 ವರ್ಷದ ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ಚಮಯವಿಳಕ್ಕು ಉತ್ಸವದ ವೇಳೆ ಕಾಲ್ತುಳಿತ ಸಂಭವಿಸಿ, 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ ಕೊಟ್ಟನ್ ಕುಳಂಗರ ದೇವಸ್ಥಾನದಲ್ಲಿ ನಡೆದಿದೆ.

ಉತ್ಸವದ ವೇಳೆ ಭಕ್ತರು ರಥವನ್ನು ಎಳೆಯುತ್ತಿದ್ದಾಗ ಕಾಲ್ತುಳಿತ ಸಂಭವಿಸಿದ್ದು, ಬಾಲಕಿ ರಥದ ದೊಡ್ಡಚಕ್ರಗಳ ಅಡಿ ಸಿಲುಕಿ ಮೃತಪಟ್ಟಿದ್ದಾಳೆ.

ಕ್ಷೇತ್ರ ಮೃತ ಬಾಲಕಿ. ಬಾಲಕಿ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು. ಚಮಯವಿಳಕ್ಕು ಉತ್ಸವದ ವೇಳೆ ರಥ ಎಳೆಯುವಾಗ ಈ ದುರಂತ ಸಂಭವಿಸಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಳು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button