
ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕೇಂದ್ರದಲ್ಲಿ ಮಗು ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.
5 ವರ್ಷದ ಆಲಿಯಾ ಮೃತ ಮಗು. ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಮಗುವನ್ನು ಆಸ್ಪತೆಗೆ ಕರೆದೊಯ್ಯಲಾಯಿತು. ಪ್ರಥಮ ಚಿಕಿತ್ಸೆ ಬಳಿಕ ವೈದ್ಯರು ಕುಷ್ಟಗಿ ಆಸ್ಪತೆಗೆ ಕರೆದೊಯ್ಯುವಂತೆ ಹೇಳಿದ್ದಾರೆ.
ಕುಷ್ಟಗಿ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿನ ವೈದ್ಯರು ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ