ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಮಾಡಲಾಗಿದ್ದು, ದಿನದ 24 ಗಂಟೆಯೂ ಅಲ್ಲಿ ಪೊಲೀಸರು ಮತ್ತು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಪತ್ತೆಯಾಗಿದ್ದು, ವಶಪಡಿಸಿಕೊಂಡು ತನಿಖೆ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ