ಪ್ರಕೃತಿ ವಿಕೋಪ ನಿಧಿಗೆ 50 ಲಕ್ಷ ರೂ. ನೀಡಿದ ಏಕಸ್ ; ರಸ್ತೆ ಸಾರಿಗೆ ಸಂಸ್ಥೆಯಿಂದ 4.74 ಕೋಟಿ ರೂ.

ಪ್ರಕೃತಿ ವಿಕೋಪ ನಿಧಿಗೆ 50 ಲಕ್ಷ ರೂ. ನೀಡಿದ ಏಕಸ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಇಲ್ಲಿಯ ಏಕಸ್ ಸಂಸ್ಥೆ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 50 ಲಕ್ಷ ರೂ. ಕೊಡುಗೆ ನೀಡಿದೆ. ಏಕಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅರವಿಂದ ಮೆಳ್ಳಿಗೇರಿ 50 ಲಕ್ಷ ರೂ. ಚೆಕ್ ನ್ನು ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರಿಗೆ ಹಸ್ತಾಂತರಿಸಿದರು.
ಬುಧವಾರ ಶೆಟ್ಟರ್ ಏಕಸ್ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಚೆಕ್ ಹಸ್ತಾಂತರಿಸಲಾಯಿತು. ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಶಶಿಕಾಂತ ಸಿದ್ನಾಳ, ಏಕಸ್ ಸಂಸ್ಥೆಯ ಸಿಇಒ ರಾಜೀವ ಕೌಲ್, ಸಂಸ್ಥೆಯ ಹಿರಿಯ ಸಿಬ್ಬಂದಿ ಇದ್ದರು.
ರಸ್ತೆ ಸಾರಿಗೆ ಸಂಸ್ಥೆಯಿಂದ 4.74 ಕೋಟಿ ರೂ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯ ರಸ್ಥೆ ಸಾರಿಗೆ ನಿಗಮ 3,07,61,880 ರೂ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ 1,66,77,724 ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದೆ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಎರಡೂ ಚೇಕ್ ಹಸ್ತಾಂತರಿಸಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಮತ್ತು ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತು ಹಿರಿಯ ಅಧಿಕಾರಿಗಳು ಇದ್ದರು.
ಸಂಸ್ಥೆಯ ಸಿಬ್ಬಂದಿ ಒಂದು ದಿನದ ವೇತನವನ್ನು ಪರಿಹಾರ ನಿಧಿಗೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ