Wanted Tailor2
Cancer Hospital 2
Bottom Add. 3

*ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಕ್ಕೆ 50 ವರ್ಷ: ವರ್ಷವಿಡೀ ಕರ್ನಾಟಕ ಸಂಭ್ರಮ*

ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿತವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಸೂಚಿಸಿದರು.

Bottom Add3
Bottom Ad 2

You cannot copy content of this page