Kannada NewsKarnataka NewsLatestPolitics

*ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು, ಸದಸ್ಯರ ಹೆಸರು ಬಹಿರಂಗಪಡಿಸಿದ ಲೋಕಾಯುಕ್ತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರನ್ನು ಲೋಕಾಯುಕ್ತ ಬಹಿರಂಗಪಡಿಸಿದೆ.

ಆಯ್ಕೆಯಾದ ಮೂರು ತಿಂಗಳ ಒಳಗಾಗಿ ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕು ಎಂಬ ನಿಯಮಿದೆ. ಆಸ್ತಿ ವಿವರ ಸಲ್ಲಿಸುವಂತೆ ಶಾಸಕರು ಹಾಗೂ ಪರಿಷತ್ ಸದಸ್ಯರಿಗೆ ಜೂನ್ 30ರ ಗಡುವು ನೀಡಲಾಗಿತ್ತು. ಗಡುವು ಮುಗಿದರೂ ಹಲವು ಶಾಸಕರು ಹಾಗೂ ಪರಿಷತ್ ಸದಸ್ಯರು ವಿವರ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಆಸ್ತಿ ವಿವರ ಸಲ್ಲಿಸದ ಶಾಸಕರು, ಸದಸ್ಯರ ಹೆಸರು ಬಹಿರಂಗವಾಗಿ ಪ್ರಕಟಿಸಿದೆ.

ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಎನ್.ರಾಜಣ್ಣ, ಜಮೀರ್ ಅಹ್ಮದ್, ಕೆ.ಹೆಚ್.ಮುನಿಯಪ್ಪ, ರಹೀಮ್ ಖಾನ್ ಸೇರಿದಂತೆ 51 ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. 21 ಪರಿಷತ್ ಸದಸ್ಯರು ಆಸ್ತಿ ವಿವರ ಸಲ್ಲಿಸಿಲ್ಲ. ಮಧು ಬಂಗಾರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಮೂವರು ಶಾಸಕರು ಗಡುವು ಮುಗಿದ ಬಳಿಕ ಆಸ್ತಿ ವಿವರ ಸಲ್ಲಿಸಿದ್ದಾರೆ.

ಇನ್ನು ಕಳೆದ ವಿಧಾನಸಭೆಯ ಅವಧಿಯಲ್ಲಿ ಸಚಿವರಾಗಿದ್ದ ಬಿ.ಶ್ರೀರಾಮುಲು, ನಾರಾಯಣಗೌಡ, ಎಸ್.ಅಂಗಾರ ಸೇರಿದಂತೆ 81 ಶಾಸಕರು ಈವರೆಗೂ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button