Kannada NewsLatestNational

*ಭೀಕರ ಅಪಘಾತ: ಮಧ್ಯಪ್ರದೇಶದಲ್ಲಿ ಬಲಿಯಾದ ಬೆಂಗಳೂರು ಇನ್ಸ್ ಪೆಕ್ಟರ್*

ಪ್ರಪ್ರಗತಿವಾಹಿನಿ ಸುದ್ದಿ: ಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಸೈಬರ್‌ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್‌ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್‌ ರವಿ ಕೆ.ಬಿ. ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ರವಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button