
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಪ್ರಮುಖ ಆರೋಪಿಗಳಿಗೆ ಕಲಬುರ್ಗಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಡಿವೈ ಎಸ್ ಪಿ ಮಲ್ಲಿಕಾರ್ಜುನ ಸೇರಿದಂತೆ 26 ಆರೋಪಿಗಳಿಗೆ ಕಲಬುರ್ಗಿಯ ಸೆಷನ್ ನ್ಯಾಯಾಲಯದ ನ್ಯಾಯಾದೀಶ ಕೆ.ಬಿ.ಪಾಟೀಲ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ಪಿಎಸ್ ಐ ನೇಮಕಾತಿ ಹಗರಣದಲ್ಲಿ ಈವರೆಗೆ ಜೈಲುಪಾಲಾಗಿದ್ದ ಒಟ್ಟು 36 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದಂತಾಗಿದೆ.
*ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವು*
https://pragati.taskdun.com/accused-deathpolice-stationbangalore-cottenpete-polistation/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ