ಪ್ರಗತಿವಾಹಿನಿ ಸುದ್ದಿ: ನವದೆಹಲಿಯ ಸುಮಾರು 55 ಕ್ಕೂ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.
ದೆಹಲಿ ಶಾಲೆಯ ಜೊತೆಗೆ ಪಶ್ಚಿಮ ಬಂಗಾಳದ ರಾಜಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಕರೆ ಮಾಡಿದ್ದು, ನಾವು ಟೆರರೂಸರ್ಸ್ ಎಂಬ ಭಯೋತ್ಪಾದಕ ಗುಂಪಿಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ. ರಾಜಭವನ ಕಟ್ಟಡದ ಒಳಗೆ ಸ್ಫೋಟಕ ಸಾಮಗ್ರಿ ಇರಿಸಿದ್ದೇವೆ. ಅಲ್ಲಿರುವ ಅನೇಕರು ಸಾಯುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ. ಆದರೆ, ಪಶ್ಚಿಮ ಬಂಗಾಳ ಪೊಲೀಸರು ಇದೊಂದು ಹುಸಿ ಕರೆ ಎಂದಿದ್ದಾರೆ. ಕರೆ ಮಾಡಿದವರ ಬಗ್ಗೆ ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ನಡುವೆ ಪೂರ್ವ ದೆಹಲಿಯ ಮಯೂರ ವಿಹಾರದಲ್ಲಿರುವ ಮದರ್ ಮೇರಿ ಶಾಲೆ ಸೇರಿ 55 ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸದ್ಯಕ್ಕೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಘಟನೆ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ