
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಬೆಳಗಾವಿ ನಗರದ ಮಾಳ ಮಾರುತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶ್ರೀನಗರದಲ್ಲಿ COTPA 2003 ಕಾಯ್ದೆ ಅಡಿಯಲ್ಲಿ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಜಾರಿ ಅಧಿಕಾರಿಗಳ ಮಾರ್ಗದರ್ಶನದಡಿಯಲ್ಲಿ ಸಾರ್ವಜನಿಕರಿಗೆ COTPA 2003 ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ ಶೈಕ್ಷಣಿಕ ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಿ ಹಾಗೂ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು.
COTPA 2003 ಕಾಯ್ದೆ ಅಡಿಯಲ್ಲಿ 58 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಹಾಗೂ ಸಾರ್ವಜನಿಕರಲ್ಲಿ ತಂಬಾಕು ಸೇವನೆ ದುಷ್ಪರಿಣಾಮದ ಕುರಿತು ಅರಿವು ಮೂಡಿಸಲಾಯಿತು.
ಈ ದಾಳಿಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರ ಮಹಾಂತೇಶ್ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಲಹೆಗಾರದ ಡಾ. ಶ್ವೇತಾ ಪಾಟೀಲ್, ಸಮಾಜ ಸೇವಕರಾದ ಕು. ಕವಿತಾ ರಾಜಣ್ಣವರ್ ಹಾಗೂ ಮಾಳ ಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.


