ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿದೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾನದ ಹಕ್ಕು ಹೊಂದಿರುತ್ತಾರೆ.
ಆದರೆ ಬೆಳಗಾವಿ ಮಹಾನಗರ ಪಾಲಿಕೆಗೆ ಆಯ್ಕೆಯಾಗಿರುವ 58 ಸದಸ್ಯರು ಈ ಬಾರಿ ಮತದಾನದಿಂದ ವಂಚಿತರಾಗುವ ಸಾಧ್ಯತೆಯೇ ಹೆಚ್ಚು. ಇದಕ್ಕೆ ಕಾರಣ ಅವರಿನ್ನೂ ಪ್ರತಿಜ್ಞೆ ಸ್ವೀಕರಿಸದಿರುವುದು.
ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು ತಿಂಗಳಾದರೂ ಮೇಯರ್, ಉಪಮೇಯರ್ ಆಯ್ಕೆಯಾಗಿಲ್ಲ. ಸದಸ್ಯರ ಪ್ರತಿಜ್ಞಾವಿಧಿ ಪೂರ್ಣಗೊಂಡಿಲ್ಲ. ಹಾಗಾಗಿ ಅವರಿನ್ನೂ ಅಧಿಕೃತವಾಗಿ ಪಾಲಿಕೆಯ ಸದಸ್ಯರೆನಿಸಿಕೊಂಡಿಲ್ಲ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 2 ಸ್ಥಾನಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆ ಡಿ.10ಕ್ಕೆ ನಡೆಯಲಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರ ಅವಧಿ ಮುಗಿದಿರುವುದರಿಂದ ಅವರೂ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಕೆಲವು ಗ್ರಾಮ ಪಂಚಾಯಿತಿಗಳಿಗೂ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಯಾಗಿಲ್ಲ. ಹಾಗಾಗಿ ಮತದಾರರ ಸಂಖ್ಯೆ ಗಣನೀಯಟವಾಗಿ ಇಳಿಕೆಯಾಗಿದೆ.
ಈಗಾಗಲೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಬೆಳಗಾವಿ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಸುವಂತಿಲ್ಲ. ಹಾಗಾಗಿ ಪ್ರತಿಜ್ಞಾವಿಧಿ ಕೂಡ ನಡೆಸಲು ಅವಕಾಶ ಇದ್ದಂತಿಲ್ಲ. ಈ ಬಗ್ಗೆ ಅಧಿಕಾರಿಗಳು ಇನ್ನಷ್ಟೆ ಸ್ಪಷ್ಟನೆ ನೀಡಬೇಕಿದೆ.
ಹಳಿತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ