Latest

5G ಇಂಟರ್ ನೆಟ್ ಸೇವೆಗೆ ಪ್ರಧಾನಿ ಮೋದಿ ಚಾಲನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತದಲ್ಲಿ ಇಂದಿನಿಂದ ಟೆಲಿಕಾಂ ವ್ಯವಸ್ಥೆಯಲ್ಲಿ ಹೊಸ ಯುಗ ಆರಂಭವಾಗಿದೆ. ದೇಶದಲ್ಲಿ ಇಂದಿನಿಂದ ಹೈಸ್ಪೀಡ್ ಇಂಟರ್ ನೆಟ್ ಸೇವೆ ಶುರುಗಾದ್ದು, 5G ಇಂಟರ್ ನೆಟ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ 5G ಸೇವೆಗೆ ಚಾಲನೆ ನೀಡಿದರು. ಈ ಮೂಲಕ ಭಾರತ ಡಿಜಿಟಲ್ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಗೆ ಮುನ್ನುಡಿ ಬರೆದಿದೆ.

ಜಿಯೋ, ಏರ್ ಟೆಲ್ ಹಾಗೂ ವೊಡಾಫೋನ್ ಈ ಮೂರು ಕಂಪನಿಗಳು 5Gಸೇವೆ ಆರಂಭಿಸಿವೆ. ಖಾಸಗಿ ನೆಟ್ ವರ್ಕ್ ಸ್ಥಾಪಿಸಲು ಅಗತ್ಯವಿರುವ ತರಂಗಾಂತರಗಳನ್ನು ಅದಾನಿ ಸಮೂಹ ಖರೀದಿ ಮಾಡಲಿದೆ.ಆಯ್ದ ಮೆಟ್ರೋ ನಗರಗಳಲ್ಲಿ 5ಜಿ ಸೇವೆ ಆರಂಭವಾಗಲಿದ್ದು ಮುಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿ ಹಂತ ಹಂತವಾಗಿ ಹೈಸ್ಪೀಟ್ ಇಂಟರ್ ನೆಟ್ ಸೌಲಭ್ಯ ದೊರಕಲಿದೆ. ಗ್ರಾಮೀಣ ಭಾಗಗಳಲ್ಲಿಯೂ 5G ದೊರಕಲಿದೆ ಎಂಬುದು ವಿಶೇಷ.

ದೇಶದ 13 ನಗರಗಳಲ್ಲಿ ಮೊದಲ ಹಂತದಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ಬೆಂಗಳೂರು, ದೆಹಲಿ, ಚೆನ್ನೈ, ಅಹಮದಾಬಾದ್, ಛಂಡೀಗಢ, ಗಾಂಧಿನಗರ, ಗುಗ್ರಾಮ್ ಹೈದರಾಬಾದ್, , ಜಾಮ್ ನಗರ, ಕೋಲ್ಕತ್ತಾ, ಲಕ್ನೋ, ಮುಂಬೈ ಹಾಗೂ ಪುಣೆ ನಗರಗಳಲ್ಲಿ ಆರಂಭವಾಗುತ್ತಿದೆ.
12 ಜಿಲ್ಲೆಗಳಲ್ಲಿ ಭಾರಿ ಮಳೆ; ಬೆಳಗಾವಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

https://pragati.taskdun.com/latest/karnatakaheavy-rainyelloalert/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button