Cancer Hospital 2
Beereshwara 33
LaxmiTai 5

*ದೇಶದಲ್ಲಿ 5ನೇ ಹಂತದ ಮತದಾನ: ಘಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಇಂದು ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಒಟ್ಟು ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 49 ಸ್ಥಾನಗಳಿಗೆ ಮತದಾನ ಆರಂಭವಾಗಿದೆ. 

5ನೇ ಹಂತದ ಮತದಾನದಲ್ಲಿ ಘಟಾನುಘಟಿ ನಾಯಕರಾದ ರಾಹುಲ್ ಗಾಂಧಿ, ಸ್ಮೃತಿ ಇರಾನಿ, ರಾಜನಾಥ್ ಸಿಂಗ್, ಚಿರಾಗ್ ಪಾಸ್ವಾನ್, ರಾಜೀವ್ ಪ್ರತಾಪ್ ರೂಡಿ, ರೋಹಿಣಿ ಆಚಾರ್ಯ, ಒಮರ್ ಅಬ್ದುಲ್ಲಾ ಮತ್ತು ಪಿಯೂಷ್ ಗೋಯಲ್ ಅವರಂತಹ ಹಿರಿಯ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.‌

Emergency Service

5ನೇ ಹಂತದಲ್ಲಿ ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಒಡಿಶಾದ 5, ಉತ್ತರ ಪ್ರದೇಶದ 14, ಬಿಹಾರದ 5, ಜಾರ್ಖಂಡ್‌ನ 3, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ತಲಾ ಒಂದು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 

ಚುನಾವಣಾ ಆಯೋಗದ ಪ್ರಕಾರ, ಈ ಹಂತದಲ್ಲಿ 8.95 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 94372 ಮತಗಟ್ಟೆಗಳನ್ನು ರಚಿಸಲಾಗಿದ್ದು, ಇದರಲ್ಲಿ 9.47 ಲಕ್ಷ ಮತಗಟ್ಟೆ ಅಧಿಕಾರಿಗಳು ಮತದಾನ ಪ್ರಕ್ರಿಯೆ ನಡೆಸಲಿದ್ದಾರೆ. 

Bottom Add3
Bottom Ad 2