Belagavi NewsBelgaum NewsKarnataka News

*5ನೇ ರಾಜ್ಯ ಹಣಕಾಸು ಆಯೋಗದ ಸಭೆ: ಇಲಾಖೆಗಳ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಯೋಗದಿಂದ ಶಿಫಾರಸು*

ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು: ಡಾ. ಸಿ ನಾರಾಯಣಸ್ವಾಮಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಆಸ್ತಿ ತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ (ಫೆ.19) ನಡೆದ ಪಂಚಾಯತ್ ರಾಜ್ ವಿಷಯಗಳ ಕುರಿತು 5ನೇ ರಾಜ್ಯ ಹಣಕಾಸು ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಆಯೋಗದಿಂದ ಶಿಫಾರಸು ಮಾಡಲಾಗುವುದು. ಕಟ್ಟಡ ತೆರಿಗೆ, ವಾಣಿಜ್ಯ ಮಳಿಗೆಗಳ ತೆರಿಗೆ ಬಾಕಿ ವಸೂಲಾತಿಗಳನ್ನು ಕ್ರಮ ವಹಿಸಬೇಕು ಎಂದರು.

ಪ್ರತಿ ಪಂಚಾಯತಿಗಳಿಂದ ಬರುವ ಆದಾಯವನ್ನು ಅನುದಾನದ ರೂಪದಲ್ಲಿ ಸಾರ್ವಜನಿಕರಿಗೆ ಪ್ರೋತ್ಸಾಹವಾಗಿ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಡಾ. ಸಿ ನಾರಾಯಣಸ್ವಾಮಿ ತಿಳಿಸಿದರು.

Home add -Advt

ಜಿಲ್ಲಾ ಪಂಚಾಯತ್ ನಲ್ಲಿ ಹೊರಗುತ್ತಿಗೆ ಅದರದಮೇಲೆ 13 ಜನ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತರೆ 325 ಒಟ್ಟು ಮಂಜೂರಾದ ಹುದ್ದೆಗಳಲ್ಲಿ 129 ಹುದ್ದೆಗಳು ಮಾತ್ರ ಮಂಜೂರಾಗಿವೆ. ಅದರಲ್ಲಿ ಒಟ್ಟು 196 ಹುದ್ದೆಗಳು ಭರ್ತಿಯಾಗಬೇಕಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದರು.

ಗ್ರಾಮ ಪಂಚಾಯತಿಗಳಲ್ಲಿ ಒಟ್ಟು ಕಾರ್ಯದರ್ಶಿ ಗ್ರೇಡ್ 1 ಮತ್ತು ಗ್ರೇಡ್ 2 ಹಾಗೂ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ನಿಯಮಾನುಸಾರ ಭರ್ತಿಯಾಗಬೇಕಿದೆ. ಪ್ರತಿ ಗ್ರಾಮ ಪಂಚಾಯಿತಿಗಳಿಗೆ 15ನೇ ಹಣಕಾಸು ಯೋಜನೆಯಡಿ 2023 -24ನೇ ಸಾಲಿನಲ್ಲಿ ಸರಾಸರಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಪ್ರತಿ ಆರ್ಥಿಕ ವರ್ಷದಲ್ಲಿ 15ನೇ ಹಣಕಾನು ಯೋಜನೆಯ ಒಟ್ಟು ಹಂಚಿಕೆಯ ಪ್ರತಿಶತ 30ರಷ್ಟು ಅನುದಾನ ನಿಗದಿಯಾಗುತ್ತಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದೊಂದಿಗೆ ಕುಡಿಯುವ ನೀರಿನ ನಿರ್ವಹಣೆಗಾಗಿ ವೆಚ್ಚ ಭರಿಸಲಾಗುತ್ತಿದೆ. ಅಲ್ಲದೆ ಗ್ರಾಮ ಪಂಚಾಯಿತಿಗಳ ಸ್ವಂತ ಸಂಪನ್ಮೂಲದಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ಬೇಡಿಕೆಗೆ ಅನುಗುಣವಾಗಿ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರಸ್ತುತ ಜಲಜೀವನ್ ಮಿಷನ್ ಯೋಜನೆಯಡಿ 171766 ಕುಟುಂಬಗಳಿಗೆ ಮತ್ತು 373 ಜನವಸತಿಗಳಿಗೆ ಮನೆ-ಮನೆ-ನಲ್ಲಿ ಸಂಪರ್ಕ ನೀಡಲಾಗುವುದರಿಂದ ನಿರ್ವಹಣ ಖರ್ಚು ಕಡಿಮೆಯಾಗಿರುತ್ತದೆ ಎಂದು ಹೇಳಿದರು.

ಖರ್ಚು ನಿರ್ವಹಣೆಗೆ ಪ್ರತಿ ಮಾಹೆವಾರು ಬಿಲ್ಲುಗಳನ್ನು ಹೆಸ್ಕಾಂ ಸರಿಯಾಗಿ ನೀಡಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲಾಗುವುದು. ಯೂನಿಟ್ ಬಳಕೆ, ಬಾಕಿ ಇರುವ ಚಿಲ್ಲುಗಳು ಪರಿಶೀಲನೆ, ನಿಷ್ಕ್ರಿಯೆ ಗೊಂಡಿರುವ ಕೊಳವೆ ಬಾವಿ, ವಿದ್ಯುತ್ ಸ್ಥಾವರಗಳು ವಿವರ ಬಿಲ್ಲುಗಳಲ್ಲಿರುವ ವ್ಯತ್ಯಾಸಗಳು ಪರಿಶೀಲಿಸಲಾಗುತ್ತಿದೆ ಎಂದರು.

5ನೇ ರಾಜ್ಯ ಹಣಕಾಸು ಆಯೋಗದ ಪರಿಶೀಲಾನಾಂಶಗಳಿಗೆ ಪೂರಕ ವಿಷಯಗಳು

ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ. ಪರಿಶಿಷ್ಟ ವರ್ಗಗಳ ಕಲ್ಯಾಣ. ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಒದಗಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಅನುವು ಮಾಡಿಕೊಡುವುದು.

ಗ್ರಾಮೀಣ ರಸ್ತೆಗಳ ನಿರ್ಮಾಣ, ದುರಸ್ತಿ/ನಿರ್ವಹಣೆಗಾಗಿ ಹೆಚ್ಚಿನ ಅನುದಾನ ನೀಡುವ ಮೂಲಕ ಸಾರಿಗೆ ವ್ಯವಸ್ಥೆಯನ್ನು ಗ್ರಾಮೀಣ ಜನರಿಗೆ ಸುಗಮಗೊಳಿಸುವುದು.

ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತ್‌ನ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಹಾಗೂ ಇತರೆ ಇಲಾಖೆಗಳ ಸರ್ಕಾರಿ ಕಛೇರಿ ಕಟ್ಟಡಗಳ ನಿರ್ಮಾಣ ಮತ್ತು ನವೀಕರಣಕ್ಕೆ ಹೆಚ್ಚಿನ ಅನುದಾನ ಒದಗಿಸುವುದು,

ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತ್‌ನ ಹಾಗೂ ಇತರ ಇಲಾಖೆಗಳ ಸರ್ಕಾರಿ ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಇನ್ನೂ ಶೀಘ್ರವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲ ಮಾಡಿಕೊಡುವುದು.

ಸರ್ಕಾರದ ಯೋಜನೆಗಳನ್ನು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುಕೂಲವಾಗುವಂತ ಅಡಳಿತ ಸುಧಾರಣೆಗಳನ್ನು ಜಾರಿಗೆ ತರುವುದು ಮತ್ತು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸುವುದು ಆಯೋಗದ ಗಮನಕ್ಕೆ ತರಬಹುದಾದ ಇತರೆ ವಿಷಯಗಳು ಮತ್ತು ಸಲಹೆಗಳ ಕುರಿತು ಸಿಇಒ ರಾಹುಲ್ ಶಿಂಧೆ ಅವರು ವಿವರಿಸಿದರು.

ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹಣಕಾಸು ಆಯೋಗ ಕಳುಹಿಸಿರುವ ಪ್ರಶ್ನಾವಳಿ ಕುರಿತ ಮಾಹಿತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಬಳಿಕ ಪಂಚಾಯಿತಿ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಾಚರಣೆ, ಹುದ್ದೆಗಳು, ಆಯವ್ಯಯ, ವೆಚ್ಚಗಳ ವಿವರ, ರಾಜ್ಯ ಮತ್ತು ಕೇಂದ್ರ ಹಣಕಾಸು ಆಯೋಗದ ಅನುದಾನ, ಹಂಚಿಕೆ, ಬಿಡುಗಡೆ, ಮಾಡಲಾದ ವೆಚ್ಚ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ್ ದಿವಟರ್ ವಿವರಿಸಿದರು.

ಸಭೆಯಲ್ಲಿ ಆಡಳಿತ ಸುಧಾರಣೆ, ಮಾಹಿತಿ ತಂತ್ರಜ್ಞಾನ, ರಾಜ್ಯ ಹಣಕಾಸು ಆಯೋಗದ ಪರಿಶೀಲನಾ ಅಂಶಗಳಿಗೆ ಪೂರಕವಾದ ಸಲಹೆಗಳನ್ನು ಪಡೆಯಲಾಯಿತು.

ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿ ಖಾತಾ ಪ್ರತಿ ದಾಖಲೆಗಳನ್ನು ತ್ವರಿತವಾಗಿ ನೀಡುವಿಕೆ, ನೀರು ಸರಬರಾಜು, ಒಳಚರಂಡಿ, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ವಿವರಿಸಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸಲು ಹೆಚ್ಚು ಅನುದಾನ, ವಿವಿಧ ಮಂಜೂರು ಅಗತ್ಯತೆ ಸೇರಿದಂತೆ ಬೇರೆಬೇರೆ ವಿಷಯಗಳ ಕುರಿತು ಆಯೋಗದ ಅಧ್ಯಕ್ಷರಿಗೆ ವಿನಂತಿಸಿದರು.

ಅದೇ ರೀತಿಯಲ್ಲಿ ಅಧಿಕಾರಿಗಳೂ ಸಹ ಸಂಸ್ಥೆಗಳಿಗೆ ಅಗತ್ಯವಿರುವ ಹೆಚ್ಚಿನ ಅನುದಾನ ಹಾಗೂ ನೆರವಿನ ಬಗ್ಗೆ ಪ್ರಸ್ತಾಪಿಸಿ ಆಯೋಗದ ಮುಂದೆ ಅಭಿಪ್ರಾಯಗಳನ್ನು ತಿಳಿಸಿದರು.

5ನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮ್ಮದ್ ಸನಾವುಲ್ಲಾ, ಆರ್. ಪೊಂಡೆ, ಸಮಾಲೋಚಕರಾದ ಎಂ.ಕೆ ಕೆಂಪೇಗೌಡ, ಸಿ.ಜಿ ಸುಪ್ರಸನ್ನ, ವಿಶೇಷಾಧಿಕಾರಿ ಇ. ಎಂ ವಹಾಬ್, ಮಹಾನಗರ ಪಾಲಿಕೆ ಮೇಯರ್ ಸವಿತಾ ಕಾಂಬಳೆ, ಉಪ ಮೇಯರ್ ಆನಂದ ಚವ್ಹಾಣ, ಮಹಾನಗರ ಪಾಲಿಕೆ ಆಯುಕ್ತರಾದ ಶುಭ.ಬಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button