Latest

5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ; ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಪೀಠ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರವಾಗಿ ನಾಳೆ ಹೈಕೋರ್ಟ್ ಏಕಸದಸ್ಯ ಪೀಠದ ನಿರ್ಧಾರ ಏನಿರಲಿದೆ ಎಂಬುದು ಕಾದುನೋಡಬೇಕಿದೆ.

Related Articles

Back to top button