Latest

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.

5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button