15 ದಿನಗಳ ಕಾಲ ಕೃಷಿ ಜಮೀನುಗಳಿಗೆ 6.80 ಟಿಎಮ್‌ಸಿ ನೀರು – ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ ೨೫ ರಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ ೬ ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆಗೆ ೨೪೦೦ ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ ೨೦೦೦ ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ ೫೫೦ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗುವುದು. ಡಿಸೆಂಬರ್ ೨೫ ರಿಂದ ಜನೇವರಿ ೧೦ ರವರೆಗೆ ಸುಮಾರು ೬.೮೦ ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ