ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದೇವರಾಜ ಅರಸ ಕಾಲೋನಿಯಲ್ಲಿರುವ ಕೆ.ಹೆಚ್.ಬಿ ಕಾಲೋನಿಯನ್ನು ಮಹಾನಗರ ಪಾಲಿಕೆಗೆ ಹಸ್ತಾಂತರ ಪ್ರಕ್ರಿಯೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು.
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಕಾಲೋನಿ ರಹವಾಸಿಗಳ ಬಹು ವರ್ಷಗಳ ಬೇಡಿಕೆಯನ್ನು ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದೇವರಾಜ ಅರಸ ಕಾಲೋನಿಯ ಕೆ.ಹೆಚ್.ಬಿ ಕಾಲೋನಿಯಲ್ಲಿನ ಮೂಲಭೂತ ಸೌಲಭ್ಯಗಳಾದ ರಸ್ತೆ, ಕುಡಿಯುವ ನೀರು, ಗಟಾರ ಹಾಗೂ ಇತರೆ ಸೌಲಭ್ಯಗಳಿಂದ ವಂಚಿತವಾಗಿತ್ತು.
ಬಹುವರ್ಷಗಳಿಂದ ಅಭಿವೃದ್ಧಿಯನ್ನೇ ಕಾಣದ ಕಾಲೋನಿಯನ್ನು ಕ್ಷೇತ್ರದ ಅಭಿವೃದ್ಧಿಯ ಮುತವರ್ಜಿಯಿಂದ ಕಾಲೋನಿಯನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಇದರಿಂದ ಕಾಲೋನಿಯನ್ನು ಅಭಿವೃದ್ಧಿಗೊಳಿಸಲು ಅನುಕೂಲಕರವಾಗಿದೆ ಹಾಗೂ ಕಾಲೋನಿಯ ಅಭಿವೃದ್ಧಿಗಾಗಿ ೬ ಕೋಟಿ ರೂಗಳನ್ನು ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ. ಹೆಚ್. ರವರಿಗೆ ಚೆಕ್‌ನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ. ಹೆಚ್, ಕೆ.ಹೆಚ್.ಬಿ ಸಹಾಯಕ ಅಭಿಯಂತರ ಗುರವ, ಜಲ ಮಂಡಳಿ ಕಾರ್ಯನಿರ್ವಾಹಕ ಅಭಿಯಂತರ ಚಂದ್ರಪ್ಪ ಹಾಗೂ ಎಲ್ಲ ರಹವಾಸಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ