
ಪ್ರಗತಿ ವಾಹಿನಿ: ಚಂಡೀಘಡ: ಹರಿಯಾಣದ ಸೋನಿಪತ್ ಮತ್ತು ಮಹೇಂದ್ರಗಡ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶುಕ್ರವಾರ ಸಂಜೆ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಒಟ್ಟು ಆರು ಜನ ಮೃತಪಟ್ಟಿದ್ದಾರೆ.
ಮಹೇಂದ್ರಘಡದ ಕಾಲಯವೆಯೊಂದರಲ್ಲಿ 9 ಯುವಕರು ಗಣೇಶ ಮೂರ್ತಿ ವಿಸರ್ಜನೆ ವೇಳೆ ರಭಸದ ನೀರಿಗೆ ಕೊಚ್ಚಿ ಹೋಗಿದ್ದರು. ಕೂಡಲೇ ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆ ನಡೆಸಿ ಐದು ಯುವಕರನ್ನು ರಕ್ಷಿಸಿದೆ. ಆದರೆ 4 ಯುವಕರು ಮೃತಪಟ್ಟಿದ್ದಾರೆ.
ಸೋನಿಪತ್ ಜಿಲ್ಲೆಯ ಯಮುನಾ ನದಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಇಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಹರಿಯಣ ಮುಖ್ಯಮಂತ್ರಿ ಮನೋಹರಲಾಲ್ ಕಟ್ಟರ್ ಅವರು ಟ್ವೀಟ್ ಮಾಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ; ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
https://pragati.taskdun.com/latest/karnatakarain-update10-districtheavy-rain/