Karnataka News

*ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ: ಈ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ವರುಣಾರ್ಭಟ ಜೋರಾಗಿದೆ. ಈ ನಡುವೆ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ 6 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇಂದಿನಿಂದ ಮೇ 27ರವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುಖ್ಯಸ್ಥ ಸಿ.ಎಸ್.ಪಾಟೀ ತಿಳಿಸಿದ್ದಾರೆ.

ಪೂರ್ವ ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button