ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರೋಬ್ಬರಿ 6 ಕೆಜಿ 55 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದ್ದು, ಈ ಚಿನ್ನಾಭರಣಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.
ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ 3 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ಕೊರಿಯರ್ ಮೂಲಕ ತರಿಸಿಕೊಂಡಿದ್ದು, ಆದರೆ ಯಾವ ಕೊರಿಯರ್ ಹಾಗೂ ಯಾರಿಗೆ ನೀಡಲೆಂದು ತರಿಸಿದ್ದು ಎಂಬ ಬಗ್ಗೆ ಬಾಯ್ಬಿಟ್ಟಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
65 ನೆಕ್ಲೇಸ್, 7 ಜೊತೆ ಬಳೆ, 150 ಗ್ರಾಂ ಓಲೆ ಸೇರಿದಂತೆ ಬರೋಬ್ಬರಿ 6 ಕೆಜಿ 55 ಗ್ರಾಂ ಚಿನ್ನಾಭರಣಗಳನ್ನು ಬೆಂಗಳೂರಿನಲ್ಲಿ ಗಸ್ತಿನಲ್ಲಿದ್ದ ಪೊಲೀಸರು ನಿನ್ನೆ ಜಪ್ತಿ ಮಾಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ