
ಪ್ರಗತಿ ವಾಹಿನಿ ಸುದ್ದಿ ಅಹಮದಾಬಾದ್ –
ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸ್ಪೋಟ ಸಂಭವಿಸಿ ಆರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಗುಜರಾತ್‌ನ ಬರೂಚ್ ಜಿಲ್ಲೆಯಲ್ಲಿ ನಡೆದಿದೆ.
ಬರೂಚ್ ಜಿಲ್ಲೆಯ ದಹೇಜ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಬೆಳಗಿನಜಾವ ೩ ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಕಾರ್ಖನೆಯಲ್ಲಿದ್ದ ರಿಯಾಕ್ಟರ್ ಸ್ಪೋಟಗೊಂಡಿದ್ದು ತಕ್ಷಣ ಇಡೀ ಆವಾರದಲ್ಲಿ ಬೆಂಕಿ ಹೊತ್ತಿಕೊಂಡಿತು. ರಿಯಾಕ್ಟರ್ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆದಿದೆ ಎಂದು ಬರೂಚ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.
60 ಅಡಿಯ ಸೇತುವೆಯನ್ನೇ ಕದ್ದ ಕಳ್ಳರು : 8 ಜನ ಪೊಲೀಸರ ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ